ಬೆಂಗಳೂರು ಮೆಡಿಕಲ್‌ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Apr 6, 2024 - 08:30
 47
Google  News Join WhatsApp Join Telegram Live

ಬೆಂಗಳೂರು ಮೆಡಿಕಲ್‌ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Panchayat Swaraj Samachar News Desk.

ಬೆಂಗಳೂರು: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಹಾಸ್ಟೆಲ್‌ನ 47 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದು, 28 ವಿದ್ಯಾರ್ಥಿನಿಯರಿಗೆ ಟ್ರಾಮಾ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಐವರಿಗೆ ಹೆಚ್ ಬ್ಲಾಕ್ ಹಾಗೂ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.

ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸದ್ಯ ಎಲ್ಲ ವಿದ್ಯಾರ್ಥಿನಿಯರ ಆರೋಗ್ಯ ಉತ್ತಮವಾಗಿದೆ. ವಿದ್ಯಾರ್ಥಿನಿಯರು ಅಸ್ವಸ್ಥಗೊಳ್ಳಲು ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಬಿಎಂಸಿಆರ್‌ಐ ಮುಖ್ಯಸ್ಥ ಮತ್ತು ನಿರ್ದೇಶಕ ಡಾ.ರಮೇಶ್‌ ಕೃಷ್ಣ ತಿಳಿಸಿದ್ದಾರೆ.

ಹೆಚ್ಚು ತಾಪಮಾನ ನಡುವೆ ಬೆಂಗಳೂರಿನಲ್ಲಿ ಕಾಲರಾ ಭೀತಿ ಶುರುವಾಗಿದೆ. ಇದರ ಮಧ್ಯೆ ಏಕಾಏಕಿ ಬೆಂಗಳೂರು ಮೆಡಿಕಲ್‌ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿನಿಯರು ಏಕಾಏಕಿ ವಾಂತಿ-ಭೇದಿಯಿಂದಾಗಿ ಅಸ್ವಸ್ಥಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲರಾ ಶಂಕೆ ವ್ಯಕ್ತವಾಗಿದೆ. ಇದರಿಂದ ಆರೋಗ್ಯ ಇಲಾಖೆಗೆ ಟೆನ್ಷನ್ ಶುರುವಾಗಿದೆ.

ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಲು ಕಾರಣವೇನು? ನೀರಿನಲ್ಲಿ ಏನಾದರೂ ಹೆಚ್ಚು ಕಡಿಮೆಯಾಗಿದ್ಯಾ? ಅಥವಾ ಊಟದಲ್ಲಿ ಏನಾದರೂ ಸಮಸ್ಯೆಯಾಗಿದ್ಯಾ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ.

Google News Join Facebook Live 24/7 Help Desk

Tags: