ಬೆಳಗಾವಿ: ಅಂಬೇಡ್ಕರ್​ ಭಾವಚಿತ್ರಕ್ಕೆ ಅಪಮಾನ, ಎರಡು ಗುಂಪುಗಳ ನಡುವೆ ಗಲಾಟೆ

Apr 15, 2024 - 10:05
 170
Google  News Join WhatsApp Join Telegram Live

ಬೆಳಗಾವಿ: ಅಂಬೇಡ್ಕರ್​ ಭಾವಚಿತ್ರಕ್ಕೆ ಅಪಮಾನ, ಎರಡು ಗುಂಪುಗಳ ನಡುವೆ ಗಲಾಟೆ

Panchayat Swaraj Samachar News Desk.

ಬೆಳಗಾವಿ: ಚಿಕ್ಕೋಡಿ ತಾಲೂಕಿನ ಶಮನೇವಾಡಿ ಗ್ರಾಮದಲ್ಲಿ ಡಾ. ಬಿಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದ್ದು, ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ರವಿವಾರ (ಏ.14) ರಂದು ಬಿಆರ್ ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೇದಿಕೆ ಮೇಲೆ ಅಂಬೇಡ್ಕರ್ ಅವರ ಭಾವಚಿತ್ರವಿಟ್ಟು ಗೌರವಿಸಲಾಗಿತ್ತು. ಬಳಿಕ ಮೆರವಣೆಗೆ ನಡೆಯುವ ಸಂದರ್ಭದಲ್ಲಿ, ವೇದಿಕೆ ಮೇಲಿದ್ದ ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಿಡಿಗೇಡಿಗಳ ಗುಂಪು ಕೆಳಗೆ ಬೀಳಿಸಿ ಅಪಮಾನ ಮಾಡಿದೆ.

ಇದನ್ನು ಕಂಡ ಕಾರ್ಯಕ್ರಮ ಆಯೋಜಕರು ಮತ್ತು ಮೆರವಣಿಗೆಯಲ್ಲಿ ಭಾಗಿಯಾದ ಜನ ಕಿಡಿಗೇಡಿಗಳ ಗುಂಪನ್ನು ಪ್ರಶ್ನಿಸಿದ್ದಾರೆ. ಆಗ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಕಿಡಿಗೇಡಿಗಳ ಗುಂಪು ಮೆರವಣಿಗೆಯಲ್ಲಿ ಮತ್ತು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಯುವಕರು, ಮಕ್ಕಳು ಮತ್ತು ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದನ್ನು ಖಂಡಿಸಿ ಸದಲಗಾ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಗಿತ್ತು. ಕೂಡಲೇ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ಸದಲಗಾ ಪೊಲೀಸ್ ಠಾಣೆ ಒಳಗೆ ಮತ್ತು ಠಾಣೆ ಮುಂದೆ ಮಹಿಳೆಯರು ಧರಣಿ ನಡೆಸಿದರು. ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದವರನ್ನು ಬಂಧಿಸುವಂತೆ ಪಟ್ಟು ಹಿಡಿದರು.

Google News Join Facebook Live 24/7 Help Desk

Tags: