ಮತದಾನ ಮಾಡಲು ಬೆಂಗಳೂರಿನಿಂದ ತಮಿಳುನಾಡಿನತ್ತ ಮತದಾರರು

Apr 19, 2024 - 09:21
 15
Google  News Join WhatsApp Join Telegram Live

ಮತದಾನ ಮಾಡಲು ಬೆಂಗಳೂರಿನಿಂದ ತಮಿಳುನಾಡಿನತ್ತ ಮತದಾರರು

Panchayat Swaraj Samachar News Desk.

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು (ಶುಕ್ರವಾರ) ನಡೆಯಲಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹರಾಷ್ಟ್ರ, ತಮಿಳುನಾಡು ಸೇರಿದಂತೆ 21 ರಾಜ್ಯಗಳ 102 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಬೆಳಗ್ಗೆ 7ರಿಂದ ಸಂಜೆ 6 ಗಂಟೆ ವರೆಗೂ ಮತದಾನ ನಡೆಯಲಿದೆ. ವ್ಯವಸ್ಥಿತ ಚುನಾವಣೆಗಾಗಿ 1.87 ಲಕ್ಷ ಮತಗಟ್ಟೆಗಳ ನಿರ್ಮಾಣ ಮಾಡಿದ್ದು, 18 ಲಕ್ಷ ಮತಗಟ್ಟೆ ಸಿಬ್ಬಂದಿ ನಿಯೋಜನೆ ಮಾಡಿದೆ.

ಉದ್ಯೋಗಕ್ಕಾಗಿ ಬಂದು ಬೆಂಗಳೂರಿನಲ್ಲಿ ನೆಲೆಸಿರುವ ನೆರೆ ರಾಜ್ಯ ತಮಿಳುನಾಡಿನ ಜನರು ತಮ್ಮ ಹಕ್ಕು ಚಲಾಯಿಸಲು ತವರಿನೆಡೆಗೆ ಪ್ರಯಾಣ ಬೆಳೆಸಿದ್ದಾರೆ.

ತಮಿಳುನಾಡಿನ ಎಲ್ಲ 39, ಉತ್ತರಾಖಂಡದ ಎಲ್ಲ 5, ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯದ ಎಲ್ಲ 2 ಸ್ಥಾನಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ರಾಜಸ್ಥಾನದ 25 ಸ್ಥಾನಗಳಲ್ಲಿ 12, ಉತ್ತರ ಪ್ರದೇಶದ 80 ಸ್ಥಾನಗಳಲ್ಲಿ 8, ಮಧ್ಯಪ್ರದೇಶದ 29 ಸ್ಥಾನಗಳಲ್ಲಿ 6, ಮಹಾರಾಷ್ಟ್ರದ 48 ಸ್ಥಾನಗಳಲ್ಲಿ 5, ಅಸ್ಸಾಂ 14 ಸ್ಥಾನಗಳಲ್ಲಿ 5, ಬಿಹಾರದ 40 ಸ್ಥಾನಗಳಲ್ಲಿ 4, ಪಶ್ಚಿಮ ಬಂಗಾಳದ 42 ಸ್ಥಾನಗಳಲ್ಲಿ 3, ಛತ್ತೀಸ್‌ಗಢದ 11 ಸ್ಥಾನಗಳಲ್ಲಿ 1 ಮತ್ತು ಪುದುಚೆರಿ, ಅರುಣಾಚಲ ಪ್ರದೇಶ, ಜಮ್ಮು ಕಾಶ್ಮೀರ, ಲಡಾಕ್, ಲಕ್ಷದೀಪ, ಮಿಜೋರಾಮ್, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರದ ತಲಾ 1 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

Google News Join Facebook Live 24/7 Help Desk

Tags: