ಯುಪಿಎ ಇದ್ದಾಗ ಪಾಕಿಸ್ತಾನದಿಂದ ಬಂದು ಬಾಂಬ್ ಹಾಕಿ ಹೋಗುತ್ತಿದ್ದರು: ಶಾ

Apr 2, 2024 - 15:48
 26
Google  News Join WhatsApp Join Telegram Live

ಯುಪಿಎ ಇದ್ದಾಗ ಪಾಕಿಸ್ತಾನದಿಂದ ಬಂದು ಬಾಂಬ್ ಹಾಕಿ ಹೋಗುತ್ತಿದ್ದರು: ಶಾ

Panchayat Swaraj Samachar News Desk.

ದೇಶದಲ್ಲಿ ಯುಪಿಎ ಅಧಿಕಾರದಲ್ಲಿದ್ದಾಗ ಪಾಕಿಸ್ತಾನದಿಂದ ಬಂದು ಬಾಂಬ್ ಹಾಕಿ ಹೋಗುತ್ತಿದ್ದರು. ಅಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ಮೌನವಾಗಿ ಇರುತ್ತಿದ್ದರು. ಆಗ ಏನಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಲಿ ಎಂದು ಅಮಿತ್ ಶಾ ಸವಾಲು ಹಾಕಿದರು. 

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿಯ ಐದು ಲೋಕಸಭಾ ಕ್ಷೇತ್ರಗಳ ಶಕ್ತಿ ಕೇಂದ್ರ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಈಗ ಕಾಶ್ಮೀರದಲ್ಲಿ ಒಂದು ಸಣ್ಣ ಕಲ್ಲು ಸಹ ಬಿಸಾಡುವುದಿಲ್ಲ. ಹತ್ತು ವರ್ಷ ಯುಪಿಎ ಅಧಿಕಾರದಲ್ಲಿದ್ದಾಗ ಏನಾಗುತ್ತಿತ್ತು ಎಂಬುದರ ಬಗ್ಗೆ ಸಿದ್ದರಾಮಯ್ಯ ಉತ್ತರಿಸಲಿ. ಪಾಕಿಸ್ತಾನದಿಂದ ಬಂದು ಬಾಂಬ್ ಹಾಕಿ ಹೋದಾಗ ಮನಮೋಹನ್ ಸಿಂಗ್ ಮೌನವಾಗಿರುತ್ತಿದ್ದರು. ಮೋದಿ ಪಾಕಿಸ್ತಾನದ ಒಳಗೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ಮಾಡಿಸಿದರು. ಇದು ನಮಗೂ ಅವರಿಗೂ ಇರುವ ವ್ಯತ್ಯಾಸ ಎಂದು ಗೃಹ ಸಚಿವರು ಹೇಳಿದರು

.

Google News Join Facebook Live 24/7 Help Desk

Tags: