ಯುಪಿಎಸ್‌ಸಿ ಫಲಿತಾಂಶ ಪ್ರಕಟ, ಆದಿತ್ಯ ಶ್ರೀವಾಸ್ತವ ದೇಶಕ್ಕೆ ಟಾಪರ್

Apr 16, 2024 - 16:54
 28
Google  News Join WhatsApp Join Telegram Live

ಯುಪಿಎಸ್‌ಸಿ ಫಲಿತಾಂಶ ಪ್ರಕಟ, ಆದಿತ್ಯ ಶ್ರೀವಾಸ್ತವ ದೇಶಕ್ಕೆ ಟಾಪರ್

Panchayat Swaraj Samachar News Desk.

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) 2023 ರ ಸೆಪ್ಟೆಂಬರ್ 15 ರಿಂದ 24 ರ ನಡುವೆ ನಡೆಸಿದ ನಾಗರೀಕ ಸೇವೆಗಳ ಅಂತಿಮ ಪರೀಕ್ಷೆಯ ಫಲಿತಾಂಶವನ್ನು ಇಂದು (16, ಏಪ್ರಿಲ್, 2024) ಪ್ರಕಟಿಸಿದೆ. https://upsc.gov.in/ ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದ್ದು, ಆದಿತ್ಯ ಶ್ರೀವಾಸ್ತವ ಎನ್ನುವರು ದೇಶಕ್ಕೆ ಟಾಪರ್ ಆಗಿದ್ದು. ಅನಿವೇಶ್ ಪ್ರಧಾನ್ ದ್ವಿತೀಯ ಹಾಗೂ ಡೋಣೂರು ಅನನ್ಯಾ ರೆಡ್ಡಿ ತೃತೀಯ ಸ್ಥಾನಗಳಿಸಿದ್ದಾರೆ. ಒಟ್ಟು 1016 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಅವರನ್ನು ಕೇಂದ್ರ ವಿವಿಧ ಸೇವೆಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಲೋಕಸೇವ ಆಯೋಗ ತಿಳಿಸಿದೆ.

ಯುಪಿಎಸ್‌ಸಿ ಫಲಿತಾಂಶ ಚೆಕ್‌ ಮಾಡುವುದು ಹೇಗೆ?

ಕೇಂದ್ರ ಲೋಕಸೇವಾ ಆಯೋಗದ ವೆಬ್‌ಸೈಟ್‌ ವಿಳಾಸ https://upsc.gov.in/ ಕ್ಕೆ ಭೇಟಿ ನೀಡಿ.

 ತೆರೆದ ವೆಬ್‌ಪುಟದಲ್ಲಿ ‘ Final Result – Civil Services Examination, 2023 ಎಂದಿರುವ ಲಿಂಕ್‌ ಕ್ಲಿಕ್ ಮಾಡಿ.

 ಪಿಡಿಎಫ್‌ ಫೈಲ್‌ ಒಂದು ಓಪನ್‌ ಆಗುತ್ತದೆ. ಇಲ್ಲಿ ಅಭ್ಯರ್ಥಿಗಳು ಹೆಸರು, ರಿಜಿಸ್ಟರ್ ನಂಬರ್‌ ಅನ್ನು ಹಾಕಿ ಚೆಕ್‌ ಮಾಡಬಹುದು.

Google News Join Facebook Live 24/7 Help Desk

Tags: