ರಾಷ್ಟ್ರೀಯ ಸಮಾಜ ಪಕ್ಷದಿಂದ ಕರ್ನಾಟಕದ ಎಂಟು ಕ್ಷೇತ್ರಗಳಲ್ಲಿ ಸ್ಪರ್ಧೆ: ಎಸ್ಎಲ್ ಅಕ್ಕಿಸಾಗರ

Apr 12, 2024 - 20:03
Apr 13, 2024 - 08:41
 132
Google  News Join WhatsApp Join Telegram Live

ರಾಷ್ಟ್ರೀಯ ಸಮಾಜ ಪಕ್ಷದಿಂದ ಕರ್ನಾಟಕದ ಎಂಟು ಕ್ಷೇತ್ರಗಳಲ್ಲಿ ಸ್ಪರ್ಧೆ: ಎಸ್ಎಲ್ ಅಕ್ಕಿಸಾಗರ

Panchayat Swaraj Samachar News Desk.

ಬೆಳಗಾವಿ: ರಾಷ್ಟ್ರೀಯ ಸಮಾಜ ಪಕ್ಷ ಕರ್ನಾಟಕದಲ್ಲಿ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂದು ರಾಷ್ಟ್ರೀಯ ಸಮಾಜ ಪಕ್ಷದ ಮಾಜಿ ರಾಷ್ಟ್ರೀಯ ಅಧ್ಯಕ್ಷ ಎಸ್ಎಲ್ ಅಕ್ಕಿ ಸಾಗರ್ ಹೇಳಿದರು.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಷ್ಟ್ರೀಯ ಸಮಾಜ ಪಕ್ಷ ಮಹಾರಾಷ್ಟ್ರದಲ್ಲಿ ಎನ್ಡಿಎ ಅಲೈಯನ್ಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಅದರಂತೆ ನಮಗೆ ಮಹಾರಾಷ್ಟ್ರದಲ್ಲಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷಕ್ಕೆ ಒಂದು ಸ್ಥಾನ ದೊರಕಿದೆ ಇದನ್ನು ಹೊರತುಪಡಿಸಿದರೆ ನಾವು 6ರಿಂದ 7 ರಾಜ್ಯಗಳಲ್ಲಿ ಸ್ವತಂತ್ರವಾಗಿ ಚುನಾವಣೆ ಎದುರಿಸುತ್ತಿದ್ದೇವೆ ಎಂದರು.

ಕರ್ನಾಟಕ ರಾಜ್ಯದಲ್ಲಿ 8 ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಬೆಳಗಾವಿ ಹಾಗೂ ಚಿಕ್ಕೋಡಿ ಮತಕ್ಷೇತ್ರಗಳಲ್ಲಿ ನಾವು ಅಭ್ಯರ್ಥಿಗಳನ್ನು ಹಾಕಲಿದ್ದೇವೆ. ಅದರಂತೆ ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಸತೀಶ್ ಸನದಿ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಅತಿ ಶೀಘ್ರದಲ್ಲಿ ನಾವು ಅಭ್ಯರ್ಥಿಯನ್ನು ಘೋಷಣೆ ಮಾಡಲಿದ್ದೇವೆ ಎಂದರು.

ಕಳೆದ ಐದು ತಿಂಗಳಗಳ ಹಿಂದೆ ಕುರುಬ ಸಮುದಾಯದ ಸಮಾವೇಶದಲ್ಲಿ ಕಾಂಗ್ರೆಸ್ಸಿನ ನಾಯಕರಗಳು ಬೆಳಗಾವಿ ಜಿಲ್ಲೆಗೆ ಒಂದು ಕುರುಬ ಸಮುದಾಯದ ಅಭ್ಯರ್ಥಿಯನ್ನು ನೀಡುವುದಾಗಿ ಘೋಷಣೆ ಮಾಡಿದ್ದರು ಆದರೆ, ಆ ಘೋಷಣೆ ಈಗ ಬರಿ ಭರವಸೆಯಾಗಿದೆ. ಆದ್ದರಿಂದ ಕುರುಬ ಸಮಾಜದಲ್ಲಿ ಬೇಸರ ಹಾಗೂ ಅ ಸಂತುಷ್ಟ ಇದೆ. ಆ ಕಾರಣದಿಂದಾಗಿ ನಮ್ಮ ಪಕ್ಷ ಈ ಸಂದರ್ಭದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕುರುಬ ಸಮುದಾಯದ ಅಭ್ಯರ್ಥಿಯನ್ನು ಹಾಕುವ ಚಿಂತನೆಯಲ್ಲಿದೆ ಎಂದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸಮಾಜ ಪಕ್ಷ ಕರ್ನಾಟಕ ರಾಜ್ಯ ಅಧ್ಯಕ್ಷರಾದ, ಧರ್ಮಣ್ಣ ತೊಂಟಪುರ್, ರಾಷ್ಟ್ರೀಯ ಸಮಾಜ ಪಕ್ಷದ ಬೆಳಗಾವಿ ಪ್ರಭಾರಿಯಾದ ಬಲರಾಮ್ ಕಾಮನವರ ಹಾಗೂ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿ ಹಾಗೂ ರಾಷ್ಟ್ರೀಯ ಸಮಾಜ ಪಕ್ಷದ ಪ್ರಧಾನ ಕಾರ್ಯದರ್ಶಿ ಸತೀಶ್ ಸನದಿ ಉಪಸ್ಥಿತರಿದ್ದರು.

Google News Join Facebook Live 24/7 Help Desk

Tags: