ವಿಡಿಯೋ ನೋಡೋ ಧೈರ್ಯ ಬರಲಿಲ್ಲ, ನಿಖಿಲ್ ಕುಮಾರಸ್ವಾಮಿ

May 4, 2024 - 21:09
 45
Google  News Join WhatsApp Join Telegram View ePaper

ವಿಡಿಯೋ ನೋಡೋ ಧೈರ್ಯ ಬರಲಿಲ್ಲ, ನಿಖಿಲ್ ಕುಮಾರಸ್ವಾಮಿ

Panchayat Swaraj Samachar News Desk.

ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಪ್ರಕರಣ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ಈ ಪ್ರಕರಣ ಕುರಿತಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದು, ನನಗೂ ನೋವಾಗಿದೆ. ಆ ವಿಡಿಯೋವನ್ನು ನೋಡುವುದಕ್ಕೆ ನಾನು ಧೈರ್ಯ ಮಾಡಿಲ್ಲ. ನನ್ನ ಆಪ್ತ ವರ್ಗದವರು ಹೇಳಿದ ಪ್ರಕಾರ ಆ ವಿಡಿಯೋಗಳನ್ನು ಕನಿಷ್ಟ ಪಕ್ಷ ಬ್ಲರ್ ಕೂಡ ಮಾಡಿಲ್ಲ. ಆದರೆ ಪಾಪ ಆ ಹೆಣ್ಣು ಮಕ್ಕಳನ್ನ ಓಪನ್ ಆಗಿ ತೋರಿಸಿದ್ದಾರೆ. ಇದು ನಿಜಕ್ಕೂ ಕೂಡ ಬೇಜಾರಾಗುತ್ತೆ. ಇದರ ಬಗ್ಗೆಯೂ ಸಹ ತನಿಖೆ ಆಗಬೇಕು ಎಂದು ಹೇಳಿದ್ದಾರೆ.

ಕರ್ನಾಟಕ ಸರ್ಕಾರ ಈಗಾಗಲೇ SIT ರಚನೆ ಮಾಡಿದೆ. ತನಿಖೆ ನಡೆಯುತ್ತಿದೆ. ಕಾನೂನಿಗಿಂತ ಯಾರು ದೊಡ್ಡವರಲ್ಲ. ಅದು ಒಂದು ಪ್ರಕ್ರಿಯೆ ಅದರ ಬಗ್ಗೆ ನಾನು ಮಾತನಾಡುವುದಕ್ಕೆ ಹೋಗಲ್ಲ. ಅಲ್ಲದೇ ಹಾಸನ ವಿಚಾರ ಆಗಲಿ ನನಗೆ ಅದಕ್ಕೂ ಸಂಬಂಧ ಇಲ್ಲ. ನಾನು ಹೆಚ್ಚಿಗೆ ಹಾಸನಕ್ಕೆ ಕಾಲೇ ಇಟ್ಟಿಲ್ಲ. ಹೋದರೆ ಹಾಸನಾಂಬೆ ಉತ್ಸವಕ್ಕೆ ಮಾತ್ರ ಹೋಗುತ್ತೇನೆ. ಹಾಸನ ಸಂಸದರಿಗೂ ನನಗೂ ಸಂಪರ್ಕ ಇರಲಿಲ್ಲ ಎಂದು ಹೇಳಿದ್ದಾರೆ.

Google News Join Facebook Live 24/7 Help Desk

Tags: