ಹಾಸನದ ಲೈಂಗಿಕ ಹಿಂಸೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

May 6, 2024 - 09:29
 14
Google  News Join WhatsApp Join Telegram View ePaper

ಹಾಸನದ ಲೈಂಗಿಕ ಹಿಂಸೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

Panchayat Swaraj Samachar News Desk.

ಬೆಂಗಳೂರು: ಹಾಸನದ ಲೈಂಗಿಕ ಹಿಂಸೆ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ ಎಂದು ವಿಶೇಷ ತನಿಖಾ ತಂಡ ಮುಖ್ಯಸ್ಥ ಬಿ.ಕೆ.ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಯಾರೇ ಆಗಲಿ ಸಾಮಾಜಿಕ ಜಾಲತಾಣಗಳಲ್ಲಿ (ವಾಟ್ಸಪ್‌ನಂತಹ ಮೆಸೆಂಜರ್ ಆಪ್ ಸೇರಿ) ಹಂಚುವುದು ಮಾಹಿತಿ ತಂತ್ರಜ್ಞಾನ ಕಾಯಿದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1), 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಖಾಸಗಿ ಮೆಸೇಜಿಂಗ್ ಆಪ್‌ಗಳ ಮುಖಾಂತರ ಹಂಚುವುದನ್ನೂ ಪತ್ತೆ ಹಚ್ಚುವುದು ಸಾಧ್ಯವಿದ್ದು, ಅಂಥದ್ದರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. 

ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ ಆದರೂ ಮಾಡಬಾರದೆಂದು ಈ ಮೂಲಕ ಸೂಚಿಸಲಾಗುತ್ತಿದೆ. ಈ ವಿಚಾರದಲ್ಲಿ ಅಗತ್ಯ ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುವುದು.

ಯಾವುದೇ ಲೈಂಗಿಕ ಹಿಂಸೆ ಅಥವಾ ಅತ್ಯಾಚಾರ ಪ್ರಕರಣಗಳಲ್ಲಿ ನಾಚಿಕೆ ಪಟ್ಟುಕೊಳ್ಳಬೇಕಾದ್ದು, ಹಿಂಜರಿಯಬೇಕಾದ್ದು, ಅವಮಾನ ಎಂದು ಭಾವಿಸಬೇಕಾದ್ದು ಅಂತಹ ಪ್ರಕರಣಗಳಲ್ಲಿ ಅಪರಾಧವೆಸಗಿದ ವ್ಯಕ್ತಿಯೇ ಹೊರತು, ಶೋಷಣೆಗೆ ಒಳಗಾದ ವ್ಯಕ್ತಿ ಅಲ್ಲ ಎಂಬುದನ್ನು ಅರಿಯಬೇಕು ಮತ್ತು ಸೂಕ್ತ ಸಂವೇದನೆಯಿಂದ ಪ್ರವರ್ತಿಸುವುದು ಸಮಾಜದ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಈ ವಿಚಾರದಲ್ಲಿ ಎಸ್‌ಐಟಿ ಅತ್ಯಂತ ಹೆಚ್ಚಿನ ಸಂವೇದನೆಯಿಂದ ನಡೆದುಕೊಳ್ಳಲಿದೆ. ಈಗಾಗಲೇ ಇದಕ್ಕೆ ಅಗತ್ಯವಿರುವ ವೃತ್ತಿಪರ ಕೌನ್ಸಿಲರ್‌ಗಳು, ವೈದ್ಯರು ಇಂತಹ ಕಾರ್ಯದಲ್ಲಿ ಅನುಭವವಿರುವ ಸಂಸ್ಥೆಗಳ ನೆರವನ್ನು ಎಸ್‌ಐಟಿ ಪಡೆದುಕೊಂಡಿದೆ. ಸಾರ್ವಜನಿಕರು ಈ ವಿಚಾರದಲ್ಲಿ ಸ್ಪಂದಿಸುವುದು ಅಗತ್ಯ.

Google News Join Facebook Live 24/7 Help Desk

Tags: