ಹೆಚ್‍ಡಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

Apr 15, 2024 - 20:24
 21
Google  News Join WhatsApp Join Telegram Live

ಹೆಚ್‍ಡಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

Panchayat Swaraj Samachar News Desk.

ಬೆಂಗಳೂರು: ಹೆಣ್ಣು ಮಕ್ಕಳ ಬಗ್ಗೆ ನೀಡಿರುವ ಹೇಳಿಕೆ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದರೆ, ಇತ್ತ ಮಹಿಳಾ ಆಯೋಗವು ನೋಟಿಸ್ ಜಾರಿಗೊಳಿಸಿದೆ.

ಮಹಿಳೆಯರ ಬಗ್ಗೆ ಲಘುವಾಗಿ ಮಾತಾಡಿದ್ದಾರೆ. ಮಹಿಳೆಯರು ದಾರಿ ತಪ್ಪಿದ್ದಾರೆ ಅಂತಾ ಮಾತಾಡಿದ್ದಾರೆ. ಮನುವಾದಿ ರೀತಿಯಲ್ಲಿ ಮನಸ್ಸು ಬಂದಂತೆ ಮಾತಾಡಿದ್ದಾರೆ. ಹೀಗಾಗಿ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಿಯೋಗ ದೂರಿನಲ್ಲಿ ಒತ್ತಾಯಿಸಿದೆ.

15 ದಿನದ ಒಳಗಡೆ ಉತ್ತರಿಸುವಂತೆ ಮಹಿಳಾ ಆಯೋಗ ಜಾರಿಗೊಳಿಸಿದ ನೋಟಿಸ್‍ನಲ್ಲಿ ತಿಳಿಸಲಾಗಿದೆ. ರಾಜಕಾರಣಿಗಳು ಮತದ ಸಲುವಾಗಿ ಆಕ್ಷೇಪಾರ್ಹ ಮಾತಾಡೋದು ಸರಿಯಲ್ಲ. ಹೆಣ್ಣಿನ ಬಗ್ಗೆ ಕೀಳು ಮಟ್ಟದಲ್ಲಿ ಮಾತಾಡುವವರು ಎಚ್ಚರಿಕೆ ವಹಿಸಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ. 

Google News Join Facebook Live 24/7 Help Desk

Tags: